alex Certify ರೈತರೇ ಗಮನಿಸಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮೂಲಕ ಅವರ ಸ್ವಾವಲಂಬಿ ಜೀವನವನ್ನು  ಸಾಕಾರಗೊಳಿಸಲು ‘ಗಂಗಾ ಕಲ್ಯಾಣ ಯೋಜನೆ’ಯಡಿ, ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹರು ಇದೇ ನವೆಂಬರ್ 29ರ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ  ಸಲ್ಲಿಸಲು ಬೇಕಾದ ದಾಖಲೆಗಳು :

→ ಪರಿಶಿಷ್ಟಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು.

→ ಆದಾಯ ಮಿತಿ ಗ್ರಾಮೀಣ ಪ್ರದೇಶದಲ್ಲಿ ರೂ1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ

→ ಕನಿಷ್ಠ 21 ವರ್ಷ ವಯೋಮಾನ

→ ಸಣ್ಣಹಿಡುವಳಿದಾರರ ಪ್ರಮಾಣಪತ್ರ  ಹಾಗೂ ಇತ್ತೀಚಿನ ಪಹಣಿ ಆದಾಯ ಪ್ರಮಾಣ ಪತ್ರ, ಕುಟು೦ಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್

ಆಸಕ್ತ ಅರ್ಹರು ನವೆಂಬರ್  29ರ ಒಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ X ಖಾತೆ @SWDGok

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...