alex Certify ರೈತರ ಆತ್ಮಹತ್ಯೆ ಕಾರಣ, ಪರಿಹಾರ ಕ್ರಮಗಳ ಅಧ್ಯಯನಕ್ಕೆ ಸಿಎಂ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಆತ್ಮಹತ್ಯೆ ಕಾರಣ, ಪರಿಹಾರ ಕ್ರಮಗಳ ಅಧ್ಯಯನಕ್ಕೆ ಸಿಎಂ ನಿರ್ಧಾರ

ಬೆಂಗಳೂರು: ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಆತ್ಮಹತ್ಯೆಗೆ ಕಾರಣ ತಿಳಿಯಲು ಮತ್ತು ಪರಿಹಾರ ಕ್ರಮಗಳ ಕುರಿತಂತೆ ಅಧ್ಯಯನ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಬರ ನಿರ್ವಹಣೆ ಮತ್ತು ಮುಂಗಾರು ಸಿದ್ಧತೆ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಜಿಲ್ಲಾಡಳಿತಗಳಿಂದ ರೈತರ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಸಿಎಂ ಮಾಹಿತಿ ಪಡೆದಿದ್ದಾರೆ.

ರಾಜ್ಯದಲ್ಲಿ 2023 -24ನೇ ಸಾಲಿನಲ್ಲಿ 842 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ನಿರ್ದಿಷ್ಟ ಕಾರಣ ಮತ್ತು ಪರಿಹಾರ ಕ್ರಮಗಳ ಕುರಿತಂತೆ ಅಧ್ಯಯನ ನಡೆಸಲು ತೀರ್ಮಾನಿಸಿದ್ದಾರೆ.

842 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಶೇಕಡ 90ರಷ್ಟು ಮನವಿಗಳು ತಿರಸ್ಕೃತವಾಗಿವೆ. 132 ಪ್ರಕರಣಗಳು ಡಿಬಿಟಿಗೆ ಬಾಕಿ ಇದ್ದು, 62 ಪ್ರಕರಣಗಳು ಉಪ ವಿಭಾಗಾಧಿಕಾರಿಗಳ ಹಂತದಲ್ಲಿ ಬಾಕಿ ಇದೆ. ಉಳಿದ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ವರದಿಗಳ ನಿರೀಕ್ಷೆಯಲ್ಲಿರುವ ಕಾರಣಕ್ಕೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೃತ ರೈತರ ಅವಲಂಬಿತರ ಪರಿಹಾರ ವಿತರಣೆಯಲ್ಲಿ ವಿಳಂಬ ಮಾಡದಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಹೆಚ್.ಕೆ. ಪಾಟೀಲ್. ಕೆ.ಹೆಚ್. ಮುನಿಯಪ್ಪ, ಎನ್. ಚಲುವರಾಯಸ್ವಾಮಿ, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಪ್ರಿಯಾಂಕ್ ಖರ್ಗೆ, ಎಸ್.ಎಸ್. ಮಲ್ಲಿಕಾರ್ಜುನ, ಸಂತೋಷ್ ಲಾಡ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಚಿವರು ಭಾಗವಹಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...