ವಿದ್ಯುತ್ ಕಡಿತ ಆತಂಕದಲ್ಲಿದ್ದ ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೃಷಿಗೆ 5 ಗಂಟೆ ವಿದ್ಯುತ್, ಲೋಡ್ ಶೆಡ್ಡಿಂಗ್ ಇಲ್ಲದಂತೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡಬೇಕು ಹಾಗೂ ಲೋಡ್‌ ಶೆಡ್ಡಿಂಗ್‌ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಿಎಂ ಈ ಕುರಿತಾಗಿ ಸೂಚನೆ ನೀಡಿದ್ದಾರೆ.

ರೈತರಿಗೆ ವಿದ್ಯುತ್ ಕೊರತೆ ಆಗದಂತೆ ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯವಾದ ಯೋಜನೆ /ಸಿದ್ಧತೆ ಏಕೆ ಮಾಡಿಕೊಂಡಿಲ್ಲ? ಇರುವ ವಿದ್ಯುತ್ ಅನ್ನು ವೈಜ್ಞಾನಿಕವಾಗಿ ಬೇರೆ ಬೇರೆ ಬ್ಯಾಚ್ ಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಮೊದಲೇ ಹೀಗೆ ಮಾಡಿದ್ದರೆ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ ಸಮಸ್ಯೆ ಆಗದಂತೆ ನಿರ್ವಹಿಸಬಹುದಿತ್ತು. ಕಚೇರಿಯಲ್ಲೇ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಚೀಫ್ ಎಂಜಿನಿಯರ್ ಗಳು ಫೀಲ್ಡ್ ಗೆ ಹೋಗಬೇಕು. ಪರಿಸ್ಥಿತಿಯನ್ನು ರೈತರಿಗೆ ಮನವರಿಕೆ ಮಾಡಿಸಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ತಾಕೀತು ಮಾಡಿದ್ದಾರೆ.

ಕೃಷಿ ಕ್ಷೇತ್ರದಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಕನಿಷ್ಠ ಐದು ಗಂಟೆ ನಿರಂತರ ವಿದ್ಯುತ್‌ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಲಭ್ಯವಿರುವ ವಿದ್ಯುತ್ತಿನ ದಕ್ಷ ಹಂಚಿಕೆಯೂ ಅತಿ ಮುಖ್ಯವಾಗಿದ್ದು, ಎಸ್ಕಾಂಗಳ ಎಂಡಿಗಳು ಈ ಕುರಿತು ಹೆಚ್ಚಿನ ನಿಗಾವಹಿಸಿ ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಎಲ್ಲ ಮುಖ್ಯ ಎಂಜಿನಿಯರುಗಳನ್ನು ಜಿಲ್ಲೆಗೊಬ್ಬರಂತೆ ನೋಡಲ್‌ ಅಧಿಕಾರಿಗಳಾಗಿ ನೇಮಕ ಮಾಡಲಾಗಿದ್ದು, ಅವರು ನಿರಂತರ 5 ಗಂಟೆ ವಿದ್ಯುತ್‌ ಪೂರೈಕೆ ಯಾವುದೇ ಅಡಚಣೆಯಿಲ್ಲದೆ ಆಗುವಂತೆ ಖಾತರಿಪಡಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಇಂದಿನ ಸಭೆಯ ತೀರ್ಮಾನಗಳ ಪಾಲನೆಯಾಗುತ್ತಿರುವುದನ್ನು ಖಾತರಿಪಡಿಸಬೇಕು ಎಂದು ಹೇಳಿದ್ದಾರೆ.

ದಕ್ಷಿಣದ ಎಲ್ಲ ರಾಜ್ಯಗಳಲ್ಲಿ ವಿದ್ಯುತ್‌ ಕೊರತೆ ತೀವ್ರವಾಗಿದೆ. ಪ್ರತಿ ವರ್ಷ ಬದಲಿ ಮಾರ್ಗೋಪಾಯ ಹೊಂದಿರಬೇಕು. ಯುದ್ಧ ಕಾಲೇ ಶಸ್ತ್ರಾಭ್ಯಾಸ ಎಂಬಂತೆ ಕಾರ್ಯಪ್ರವೃತ್ತರಾದರೆ ಸಮಸ್ಯೆ ಬಗೆಹರಿಯುವುದಿಲ್ಲ. ಶೇ.13 ರಷ್ಟು ವಿದ್ಯುತ್‌ ವಿತರಣೆ ನಷ್ಟವಾಗುತ್ತಿದೆ. ವಿದ್ಯುತ್‌ ಕಳವು ಗೃಹ ಜ್ಯೋತಿಯಿಂದ ಕಡಿಮೆಯಾಗಿದೆ. ಕೈಗಾರಿಕಾ ವಿದ್ಯುತ್‌ ಕಳವು ಅತಿ ಕಡಿಮೆ ಎಂದು ಹೇಳಿದ್ದಾರೆ.

ಕಬ್ಬಿನ ಬೆಳೆಗೆ ನೀರು ಹಾಯಿಸಲು ಕೆಲವು ಜಿಲ್ಲೆಗಳಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕಬ್ಬಿನ ಕಟಾವು, ಅರೆಯುವಿಕೆ ಪ್ರಾರಂಭವಾದ ಕೂಡಲೇ ಬೇಡಿಕೆ ಇಳಿಕೆಯಾಗಲಿದ್ದು, ಕಬ್ಬು ಅರೆಯುವಿಕೆಯೊಂದಿಗೆ ಕೊ-ಜೆನರೇಶನ್‌ ನಿಂದ ವಿದ್ಯುತ್‌ ಲಭ್ಯವಾಗುತ್ತದೆ ಎಂದು ಹೇಳಿದ್ದಾರೆ.

https://twitter.com/CMofKarnataka/status/1712816445988671891

https://twitter.com/CMofKarnataka/status/1712816616436908291

https://twitter.com/CMofKarnataka/status/1712816806388523350

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read