ಬೆಂಗಳೂರು: ಸಾಲದ ಸುಳಿಗೆ ಸಿಲುಕಿ ಹೊರಬರಲಾಗದೇ ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರ ಸಂಖ್ಯೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆಗಸ್ಟ್ ಅಂತ್ಯದವರೆಗೆ ರಾಜ್ಯದಲ್ಲಿ 180 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜುಲೈ ಅಂತ್ಯದಲ್ಲಿ 137 ಇದ್ದ ರೈತರ ಆತ್ಮಹತ್ಯೆ ಪ್ರಕರಣ ಆಗಸ್ಟ್ ಅಂತ್ಯಕ್ಕೆ 180ಕ್ಕೆ ಏರಿಕೆಯಾಗಿರುವುದು ಆತಂಕಕಾರಿ ಬೆಳವಣಿಗೆ. ಜುಲೈನಲ್ಲಿ ಕೆಲವೆಡೆ ಸಂಭವಿಸಿದ ಅತಿವೃಷ್ಟಿಯಿಂದಾಗಿ ರೈತರ ಬೆಳೆ ನಾಶವಾಗಿದೆ. ಬಳಿಕ ಮಳೆಯೇ ಇಲ್ಲದೇ ಬರದ ಛಾಯೆ ಆವರಿಸಿದ್ದು, ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದಾನೆ.
ಆಗಸ್ಟ್ 25ರವರೆಗೆ 82.3 ಲಕ್ಷ ಹೆಕ್ಟೇರ್ ಗಳಲ್ಲಿ ಶೇ.81% ರಷ್ಟು ಬಿತ್ತನೆ ಮಾಡಲಾಗಿದೆ. ಆದರೆ ಮಳೆ ಕೊರತೆಯಿಂದಾಗಿ ಬೆಳೆಗಳು ಒಣಗಿ ಹೋಗಿವೆ. ಇದರಿಂದ ಕಂಗಾಲಾಗಿರುವ ರೈತರು ಸಾಲದಿಂದ ಹೊರಬರಲಾಗದೇ ದುಡುಕಿನ ನಿರ್ಧಾರ ಕೈಗೊಳ್ಳುತ್ತಿದ್ದಾರೆ.