ಸೌಂದರ್ಯ ಸ್ಪರ್ಧೆಯಲ್ಲಿ ವೇದಿಕೆ ಏರಿ ರ್ಯಾಂಪ್ ವಾಕ್ ಮಾಡಿದ ತಮಿಳುನಾಡಿನ ಐವರು ಪೊಲೀಸರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ.
ಮೈಲಾಡುತುರೈ ಜಿಲ್ಲೆಯಲ್ಲಿ ಖಾಸಗಿ ಸಂಸ್ಥೆಯಿಂದ ಏರ್ಪಡಿಸಿದ್ದ ಸೌಂದರ್ಯ ಸ್ಪರ್ಧೆಯಲ್ಲಿ ಸೆಂಬನಾರ್ಕೋವಿಲ್ ಪೊಲೀಸ್ ಠಾಣೆಯ ಸಹಾಯಕ ಇನ್ಸ್ಪೆಕ್ಟರ್ ಸುಬ್ರಮಣ್ಯಂ ಸೇರಿದಂತೆ ರೇಣುಕಾ, ಅಶ್ವಿನಿ, ನಿತ್ಯಶೀಲಾ ಮತ್ತು ಶಿವನೇಸನ್ ಎಂಬವರು ಭಾಗವಹಿಸಿದ್ದರು.
ಇವರುಗಳು ಸಮವಸ್ತ್ರ ಧರಿಸಿಯೇ ಸೌಂದರ್ಯ ಸ್ಪರ್ಧೆಯ ವೇದಿಕೆ ಏರಿ ರ್ಯಾಂಪ್ ವಾಕ್ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ನಾಗಪಟ್ಟಣಂ ಪೊಲೀಸ್ ವರಿಷ್ಠಾಧಿಕಾರಿಗಳು, ಐವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ.