
ಬೆಳಗಾವಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಾವನೇ ಅಳಿಯನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ.
ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. 30 ಗುಂಟೆ ಜಮೀನಿಗಾಗಿ ಶಾಂತಿನಾಥ್ ಅಲಗೂರು ಮೇಲೆ ಮಾವ ಗುಂಡಿನ ದಾಳಿ ನಡೆಸಿದ್ದಾರೆ.
32 ವರ್ಷದ ಶಾಂತಿನಾಥ ಎಂಬುವವರ ಮೇಲೆ ಮಾವ ಧನಪಾಲ್ ಆಸಂಗಿ (54) ಗುಂಡಿನ ದಾಳಿ ನಡೆಸಿದ್ದು, ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿರುವ ಶಾಂತಿನಾಥನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.