
ಧಾರವಾಡ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನೇ ಸೊಸೆಯನ್ನು ಕೊಲೆ ಮಾಡಿದ ಘಟನೆ ಹುಲಕೊಪ್ಪದಲ್ಲಿ ನಡೆದಿದೆ.
35 ವರ್ಷದ ಸಕ್ಕೂಬಾಯಿ ಕೊಲೆಯಾದವರು ಎಂದು ಹೇಳಲಾಗಿದೆ. ನೇಣು ಹಾಕಿ ಅವರನ್ನು ಕೊಲೆ ಮಾಡಲಾಗಿದೆ. ಧಾರವಾಡ ಜಿಲ್ಲೆ ಕಲಘಟಕಿ ತಾಲೂಕಿನ ಹುಲಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೊಲೆಗೈದ ಶಿವಾಜಿಯನ್ನು ಕುಟುಂಬದವರು ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಸೊಸೆಗೆ ನೇಣು ಬಿಗಿದು ಕೊಂದಿದ್ದಾನೆ ಎಂದು ಕುಟುಂಬಸ್ಥರು ಕಣ್ಣೀರು ಹಾಕಿದ್ದರೆ. ಕಲಘಟಕಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.