
ಬೆಂಗಳೂರು: ಬೆಂಗಳೂರಿನಲ್ಲಿ ತಂದೆಯಿಂದಲೇ ಮಗನ ಬರ್ಬರ ಹತ್ಯೆಯಾಗಿದೆ. ಬೆಂಗಳೂರು ಆರ್.ಟಿ. ನಗರದ ಚಾಮುಂಡಿನಗರದಲ್ಲಿ ಘಟನೆ ನಡೆದಿದೆ.
18 ವರ್ಷದ ಸುಲೇಮಾನ್ ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಕಬ್ಬಿಣದ ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಸುಲೇಮಾನ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆರೋಪಿ ಮೊಹಮ್ಮದ್ ಶಂಶೀರ್ ನನ್ನ ಪೊಲೀಸರು ಬಂಧಿಸಿದ್ದಾರೆ. ಆರ್.ಟಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.