ಬೆಂಗಳೂರು: ಬೆಂಗಳೂರಿನ ಗೋವಿಂದರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ್ದಾನೆ.
ಸೆಕ್ಯೂರಿಟಿ ಗಾರ್ಡ್ ಬಸವರಾಜ್(60) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಆಟೋ ಚಾಲಕನಾಗಿದ್ದ ಪುತ್ರ ನೀಲಧರ ಕೃತ್ಯವೆಸಗಿದ್ದಾನೆ. ಮದ್ಯಪಾನಕ್ಕೆ ಹಣ ನೀಡಿಲ್ಲವೆಂದು ಇಟ್ಟಿಗೆಯಿಂದ ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ. ಮಾರೇನಹಳ್ಳಿ ಪಿಎಸ್ ಲೇಔಟ್ ನಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 15 ದಿನಗಳ ಬಳಿಕ ಶೆಡ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ತಂದೆಯ ಶವ ಪತ್ತೆಯಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.