ತುಮಕೂರು: 14 ವರ್ಷದ ಪುತ್ರಿಯ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ.
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉತ್ತರ ಪ್ರದೇಶದಿಂದ ಎಂಟು ತಿಂಗಳ ಹಿಂದೆ ಕೂಲಿ ಕೆಲಸಕ್ಕೆ ಬಂದಿರುವ ಕುಟುಂಬ ಹೊನ್ನವಳ್ಳಿಯಲ್ಲಿ ನೆಲೆಸಿದೆ. ಇತ್ತೀಚೆಗೆ ಬಾಲಕಿ ಆರೋಗ್ಯದಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದ್ದು, ತಂದೆಯೇ ಆಕೆಯ ಮೇಲೆ ಅತ್ಯಾಚಾರ ಎಸಗಿರುವುದು ತಿಳಿದು ಬಂದಿದೆ. ಪೋಕ್ಸೋ ಪ್ರಕರನ, ಅತ್ಯಾಚಾರ ಆರೋಪದಡಿ ಕೇಸು ದಾಖಲಾಗಿದೆ.