ನವವಿವಾಹಿತೆ ಪುತ್ರಿಯ ಮೇಲೆ ತಂದೆಯೇ ಅತ್ಯಾಚಾರವೆಸಗಲು ಯತ್ನಿಸಿದ ಅಮಾನವೀಯ ಘಟನೆಯೊಂದು ಉತ್ತರ ಪ್ರದೇಶದ ಲಖೀಮ್ಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ವಿವಾಹವಾಗಿದ್ದ ಪುತ್ರಿಯ ತವರಿಗೆ ಬಂದಿದ್ದಳು. ಈಕೆ ಮನೆಯಲ್ಲಿ ಮಲಗಿದ್ದ ವೇಳೆ ತಂದೆ ಅತ್ಯಾಚಾರವೆಸಗಲು ಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪುತ್ರಿ ಮಲಗಿದ್ದ ವೇಳೆ ಆಕೆಯ ಅಂಗಾಂಗಗಳನ್ನು ತಂದೆ ಮುಟ್ಟಿದ್ದಾರೆ. ಅಲ್ಲದೇ ಆಕೆಗೆ ಕಿರುಚದಂತೆ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ. ಆದರೆ ಪುತ್ರಿ ಜೋರಾಗಿ ಕಿರುಚಿಕೊಳ್ಳುವ ಮೂಲಕ ತಾಯಿಯನ್ನು ಎಬ್ಬಿಸಿದ್ದಾಳೆ.
ತಂದೆ ತನ್ನ ಮೇಲೆ ಈ ಹಿಂದೆಯೂ ಲೈಂಗಿಕ ದೌರ್ಜನ್ಯ ಎಸಗಿದ್ದು ಯಾರ ಬಳಿಯೂ ಹೇಳದಂತೆ ಬೆದರಿಕೆಯೊಡ್ಡಿದ್ದರು ಎಂದು ಪೊಲೀಸರ ಬಳಿ ಸಂತ್ರಸ್ತೆ ಹೇಳಿದ್ದಾಳೆ. ತನಿಖೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಮದ್ಯದ ಅಮಲಿನಲ್ಲಿ ತಂದೆ ಈ ಕೃತ್ಯ ಎಸಗಲು ಯತ್ನಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.