ಶಿವಮೊಗ್ಗ: ಆಂಬುಲೆನ್ಸ್ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿದೆ.
ಸಂತೆಕಡೂರು ಸಮೀಪದ ರಾಂಪುರ ನಿವಾಸಿ ಬಸವರಾಜಪ್ಪ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪುತ್ರ ರಾಜು ಮಂಗಳೂರಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೇ 14ರಂದು ಸಂಜೆ ಕೆಲಸ ಮುಗಿಸಿ ಬೈಕ್ ನಲ್ಲಿ ಬಸವರಾಜಪ್ಪ ಮನೆ ಕಡೆಗೆ ಹೋಗುವ ವೇಳೆ ಆಂಬುಲೆನ್ಸ್ ಡಿಕ್ಕಿ ಹೊಡೆದು ಅವರ ತಲೆಗೆ ಪೆಟ್ಟಾಗಿದೆ. ಅದೇ ಆಂಬುಲೆನ್ಸ್ ನಲ್ಲಿ ಬಸವರಾಜಪ್ಪ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಂಬುಲೆನ್ಸ್ ಚಾಲಕನ ವಿರುದ್ಧ ತುಂಗಾನಗರ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ನಡುವೆ ಅವರ ಮಗ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಎರಡೂ ಘಟನೆಗಳಿಂದ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ.