ಕೋಲಾರ: ತಂದೆ ಹಾಗೂ ಮಗನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಂ.ವಿ.ನಗರದಲ್ಲಿ ನಡೆದಿದೆ.
ತಂದೆ ವಸಂತರಾಜುಲು (84) ಹಾಗೂ ಮಗ ಸೂರ್ಯ ಪ್ರಕಾಶ್ (44) ಶವ ಕೊಳೆತ ಸ್ಥಿತಿಯಲ್ಲಿ ಮನೆಯಲ್ಲಿಯೇ ಪತ್ತೆಯಾಗಿದೆ. ಮೂರು ದಿನಗಳ ಹಿಂದೆಯೇ ಮಗ ಸೂರ್ಯ ಪ್ರಕಾಶ್ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ತನ್ನನ್ನು ನೋಡಿಕೊಳ್ಳುತ್ತಿದ್ದ ಮಗ ಆತ್ಮಹತ್ಯೆಗೆ ಶರಣಾಗಿದ್ದನ್ನು ಕಂಡು ಮಾನಸಿಕವಾಗಿ ನೊಂದ ತಂದೆಯೂ ಸಾವನ್ನಪ್ಪಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಕೆಜಿಎಫ್ ಎಸ್ ಪಿ ಶಾಂತಕುಮಾರ್ ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ತಂದೆ ಹಾಗೂ ಮಗನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರೆದಿದೆ.