ಕಲಬುರಗಿ: ಫಾದರ್ಸ್ ಡೇ ದಿನವೇ ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಣಮಂತ(36), ಅಕ್ಷತಾ(6), ಓಂಕಾರ(9) ಮೃತಪಟ್ಟವರು. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪೋಚಾವರಂನಲ್ಲಿ ಘಟನೆ ನಡೆದಿದೆ.
ಹೈದರಾಬಾದ್ ನಲ್ಲಿ ಮೃತ ಹಣಮಂತ ಕೂಲಿ ಕೆಲಸ ಮಾಡಿಕೊಂಡಿದ್ದರು. ಜೂನ್ 16 ರಂದು ಪತ್ನಿಯನ್ನು ಬಿಟ್ಟು ಸ್ವಗ್ರಾಮಕ್ಕೆ ಬಂದಿದ್ದ ಅವರು ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಕುಂಚಾವರಂ ಪೋಲಿಸ್ ತಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.