ಹಾವೇರಿ: ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಂದೆಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆಯ ಹಳೆರಿತ್ತಿ ಗ್ರಾಮದಲ್ಲಿ ನಡೆದಿದೆ.
42 ವರ್ಷದ ನಾಗೇಶ್ ಪವಾಡೆಪ್ಪ ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಪತ್ನಿ ಜೊತೆ ಹಣದ ವಿಚಾರವಾಗಿ ಜಗಳವಾಡಿದ್ದ ನಾಗೇಶ್, ಬಳಿಕ 10 ವರ್ಷದ ಮಗ ಹಾಗೂ 8 ವರ್ಷದ ಮಗಳನ್ನು ಊರ ಹೊರಗಡೆ ಕರೆದುಕೊಂಡು ಹೋಗಿ ಅವರಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗಂಭೀರ ಸ್ಥಿತಿಯಲ್ಲಿದ್ದ ಮೂವರನ್ನು ಸ್ಥಳೀಯರು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಗಿನೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.