ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್.ಡಿ.ಎ. ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ ವಶಕ್ಕೆ ಪಡೆದುಕೊಂಡಿದೆ.
ಉಪನ್ಯಾಸಕರಾದ ಬಸಣ್ಣ ಪೂಜಾರಿ ಮತ್ತು ಚಂದ್ರಕಾಂತ ಅವರನ್ನು ಸಿಐಡಿ ವಶಕ್ಕೆ ಪಡೆದುಕೊಂಡಿದೆ. ಬಸಣ್ಣ ಅಫಜಲಪುರ ಸರ್ಕಾರಿ ಪಿಯು ಕಾಲೇಜ್ ಪ್ರಭಾರ ಪ್ರಾಂಶುಪಾಲರಾಗಿದ್ದಾರೆ. ಚಂದ್ರಕಾಂತ ಕರಜಗಿ ಗ್ರಾಮದ ಪಿಯು ಕಾಲೇಜ್ ಪ್ರಾಂಶುಪಾಲರಾಗಿದ್ದಾರೆ.
ರಾಯಲ್ ಪಬ್ಲಿಕ್ ಶಾಲೆಯಲ್ಲಿ ಚಂದ್ರಕಾಂತ ಪರೀಕ್ಷಾ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸಿದ್ದರು. ಬಸಣ್ಣ ಪೂಜಾರಿ ಪ್ರಶ್ನೆ ಪತ್ರಿಕೆ ಕಸ್ಟೊಡಿಯನ್ ಆಗಿದ್ದರು. ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಕಲಬುರಗಿ ಸಿಐಡಿ ಕಚೇರಿಗೆ ಕರೆತಂದಿದ್ದಾರೆ. ಸಿಐಡಿ ಕಚೇರಿಯಲ್ಲಿ ಇಬ್ಬರ ವಿಚಾರಣೆ ನಡೆಸಲಾಗಿದೆ.