ಶಿವಮೊಗ್ಗ: ಇಂದು ನಡೆಯಬೇಕಿದ್ದ ಎಫ್.ಡಿ.ಎ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಪರೀಕ್ಷೆಯನ್ನು ಮುಂದೂಡಲಾಗಿದೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಕರ್ನಾಟಕ ಲೋಕಸೇವಾ ಆಯೋಗದ ಸಿಬ್ಬಂದಿಯೇ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಎಫ್.ಡಿ.ಎ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು. ಅಗತ್ಯವಾದರೆ ಹುದ್ದೆಯಿಂದ ವಜಾ ಮಾಡಲಾಗುವುದು ಎಂದು ಹೇಳಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡು ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಸಮಗ್ರ ತನಿಖೆಗೆ ಆದೇಶ ನೀಡಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ತನಿಖೆ ಬಳಿಕ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.