
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ಕರ್ನಾಟಕಕ್ಕೆ 37,647 ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಹರಿದು ಬಂದಿದೆ. ಕಳೆದ 5 ವರ್ಷದಲ್ಲಿ ರಾಜ್ಯಕ್ಕೆ ಹರಿದು ಬಂದ ಎಫ್.ಡಿ.ಐ. ಪ್ರಮಾಣ 4,27,130 ಕೋಟಿ ರೂ. ನಷ್ಟಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಐದು ವರ್ಷಗಳ ಲೆಕ್ಕಾಚಾರದಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳಲ್ಲಿ ಮಹಾರಾಷ್ಟ್ರ, ಗುಜರಾತ್ ನಂತರದ ಸ್ಥಾನವನ್ನು ಪಡೆದುಕೊಂಡಿದೆ.
ಕೇಂದ್ರ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ಭಾರತಕ್ಕೆ 3.45 ಲಕ್ಷ ಕೋಟಿ ರೂ. ವಿದೇಶಿ ನೇರ ಬಂಡವಾಳ ಹೂಡಿಕೆಯಾಗಿದೆ.
ಈ 9 ತಿಂಗಳ ಅವಧಿಯಲ್ಲಿ ಮಹಾರಾಷ್ಟ್ರಕ್ಕೆ 1.39 ಲಕ್ಷ ಕೋಟಿ ರೂ., ಗುಜರಾತ್ ಗೆ 47,000 ಕೋಟಿ ರೂ., ಕರ್ನಾಟಕಕ್ಕೆ 37,647 ಕೋಟಿ ರೂ. ವಿದೇಶಿ ನೇರ ಬಂಡವಾಳ ಹೂಡಿಕೆಯಾಗಿದೆ ಎಂದು ಹೇಳಲಾಗಿದೆ.