ಭಾರತ ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸಿದ ಹಿನ್ನಲೆಯಲ್ಲಿ “ಸಂವಿಧಾನ ಜಾಗೃತಿ ಜಾಥಾ” ಎಂಬ ಕಾರ್ಯಕ್ರಮದಡಿಯಲ್ಲಿ ರಾಜ್ಯ ಸರ್ಕಾರವು ಫೆ.25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಷ್ಟ್ರೀಯ ಮಟ್ಟದ ಸಮ್ಮೇಳನ ಏರ್ಪಡಿಸಲಾಗಿದ್ದು, ಸಮ್ಮೇಳನದಲ್ಲಿ ಭಾಗವಹಿಸಲು ಜಿಲ್ಲೆಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಆಸಕ್ತರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಮಟ್ಟದ ಸಮ್ಮೇಳನದಲ್ಲಿ ಭಾಗವಹಿಸಲು ಬಳ್ಳಾರಿ ಜಿಲ್ಲೆಯಿಂದ ತಾಲ್ಲೂಕುವಾರು ಒಟ್ಟು 10 ಬಸ್‍ಗಳ ವ್ಯವಸ್ಥೆ ಮಾಡಲಾಗಿದ್ದು, ಆಸಕ್ತರು ಭಾಗವಹಿಸಲು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದ ಆವರಣದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಮತ್ತು ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.