ಬೆಂಗಳೂರು : ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 3ರ ವರೆಗೆ ಪುಸ್ತಕ ಮೇಳ ಆಯೋಜಿಸಲಾಗಿದೆ.
ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 3ರ ವರೆಗೆ ಆಯೋಜಿಸಲಾಗಿರುವ ಪುಸ್ತಕ ಮೇಳದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರಸಕ್ತ ಸಾಲಿನ ಅನುದಾನದಲ್ಲಿ ₹2 ಲಕ್ಷ ಮಿತಿಯೊಳಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.