ಬೆಂಗಳೂರು : 2025ರ ಫೆಬ್ರವರಿ 11 ರಿಂದ 14ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದನ್ನು ಪರಿಣಾಮಕಾರಿಯಾಗಿ ಬಿಂಬಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಜಾಗತಿಕ ಹೂಡಿಕೆದಾರರ ಸಮಾವೇಶವು ಬಂಡವಾಳ ಹೂಡಿಕೆ, ಕೈಗಾರಿಕೆ ಮತ್ತು ಬೆಳವಣಿಗೆ, ಆರ್ಥಿಕ ಅಭಿವೃದ್ಧಿ ಹೀಗೆ ಹಲವು ದೃಷ್ಟಿಗಳಿಂದ ಮಹತ್ವದ್ದಾಗಿದೆ. ಈ ಸಮಾವೇಶದಲ್ಲಿ ದೇಶ – ವಿದೇಶಗಳ 5,000 ಪ್ರತಿನಿಧಿಗಳು ಮತ್ತು ತಾಂತ್ರಿಕ ಪರಿಣತರು ಭಾಗವಹಿಸಲಿದ್ದಾರೆ. ಮೊದಲ ಬಾರಿಗೆ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಮಹಿಳಾ ಉದ್ಯಮಿಗಳಿಗೂ ಸೂಕ್ತ ಪ್ರಾತಿನಿಧ್ಯ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
2025ರ ಫೆಬ್ರವರಿ 11 ರಿಂದ 14ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದನ್ನು ಪರಿಣಾಮಕಾರಿಯಾಗಿ ಬಿಂಬಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಜಾಗತಿಕ ಹೂಡಿಕೆದಾರರ ಸಮಾವೇಶವು… pic.twitter.com/fYhrs2ksIX
— DIPR Karnataka (@KarnatakaVarthe) November 21, 2024