ಬೆಂಗಳೂರು : ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ ವಾಣಿಜ್ಯ ಮಳಿಗೆಗಳು, ಉದ್ಯಮಗಳು ಹಾಗೂ ಅಂಗಡಿ-ಮುಂಗಟ್ಟುಗಳ ಮುಂದೆ ಅಳವಡಿಕೆ ಮಾಡಲಾಗಿರುವ ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆ ಮಾಡುವುದು ಕಡ್ಡಾಯವಾಗಿದ್ದು, ಇದಕ್ಕೆ ಫೆ.28ರವರೆಗೆ ಗಡುವು ನೀಡಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲ ವಾಣಿಜ್ಯೋದ್ಯಮ, ಅಂಗಡಿ ಮುಂಗಟ್ಟುಗಳ ಮೇಲೆ ಅಳವಡಿಸುವ ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆಯನ್ನು ಬಳಸಬೇಕು ಎಂದು ಸೂಚನೆ ನೀಡಿದ್ದಾರೆ. ಕನ್ನಡ ನಾಮಫಲಕ ಅಳವಡಿಕೆಗೆ ಫೆ.28 ಕೊನೆಯ ದಿನವಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದ್ದಾರೆ.
ಕನ್ನಡದ ನಾಮಫಲಕ ಅಳವಡಿಸದ ಹಲವು ಅಂಗಡಿ, ಮುಂಗಟ್ಟುಗಳಿಗೆ ಬಿಬಿಎಂಪಿ ಬೀಗ ಹಾಕಿದೆ. ಫೆಬ್ರವರಿ ಅಂತ್ಯದೊಳಗೆ ನಾಮಫಲಕ ಕನ್ನಡದಲ್ಲಿ ಇರುವಂತೆ ಮಾಲೀಕರು ನೋಡಿಕೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದರು.