ಬೆಂಗಳೂರು : ಬೆಂಗಳೂರಿನಲ್ಲಿ ಫೆ. 12 ರಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸಿಎಂ ‘ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಡಿ 2025 ಫೆಬ್ರವರಿ 12 ರಿಂದ 14ರವರೆಗೆ “Invest Karnataka -2025” ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ನನ್ನ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ಸಮ್ಮತಿಸಿದೆ. ಈಗಾಗಲೇ 75 ಕೋಟಿ ರೂ.ಗಳನ್ನು ಒದಗಿಸಲಾಗಿದ್ದು, ಹೆಚ್ಚುವರಿ 15 ಕೋಟಿ ರೂ.ಗಳನ್ನು ಒದಗಿಸಲು ಸಚಿವ ಸಂಪುಟ ಒಪ್ಪಿದೆ’ ಎಂದಿದ್ದಾರೆ.
ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಕೋಟಿ ರೂ.ಗಳ ವೆಚ್ಚದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣ ಮಾಡಲು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಮಂಜೂರಾತಿ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.