ದಾವಣಗೆರೆ: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಗಳೂರು ಪಟ್ಟಣದಲ್ಲಿ ನಡೆದಿದೆ.
ಬಸವರಾಜ್ ಎಂಬುವವರು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತನ್ನ ಸಾವಿಗೆ ನನ್ನ ಪತ್ನಿಯೇ ಕಾರಣ, ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ.
ನನ್ನ ಪತ್ನಿ, ಪ್ರಿಯಕರನಿಗೆ ಸರಿಯಾದ ಶಿಕ್ಷೆ ವಿಧಿಸಬೇಕು, ನನ್ನ ಮಕ್ಕಳನ್ನು ನನ್ನ ತಾಯಿ ನೋಡಿಕೊಳ್ಳಬೇಕು ಎಂದು ಡೆತ್ ನೋಟ್ ಬರೆದಿಟ್ಟು ಬಸವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.