alex Certify ಗಮನಿಸಿ: ಶುಲ್ಕ ಮರುಪಾವತಿಗೆ ಅರ್ಜಿ ಅಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಶುಲ್ಕ ಮರುಪಾವತಿಗೆ ಅರ್ಜಿ ಅಹ್ವಾನ

ಹಾಸನ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಾರಿಗೊಳ್ಳುತ್ತಿರುವ ಯೋಜನೆ/ಕಾರ್ಯಕ್ರಮಗಳಾದ ಶುಲ್ಕ ಮರುಪಾವತಿ ಯೋಜನೆ ಮತ್ತು ವಿವಾಹ ಪ್ರೋತ್ಸಾಹ ಯೋಜನೆ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಹಾಗೂ ಕಾಲೇಜು ವಿದ್ಯಾಥಿ/ವಿದ್ಯಾರ್ಥಿನಿಯರುಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಹ ವಿಕಲ ಚೇತನರುಗಳು ಅಗತ್ಯ ದಾಖಲಾತಿಗಳೊಂದಿಗೆ 31-12-2024 ರೊಳಗೆ ಸಲ್ಲಿಸತಕ್ಕದ್ದು.

ಯೋಜನೆಗಳ ವಿವರಗಳು: ಶುಲ್ಕ ಮರುಪಾವತಿ ಯೋಜನೆ: ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಎಸ್.ಎಸ್.ಎಲ್.ಸಿ. ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ನಾತಕೋತ್ತರ ಮತ್ತು ಔದ್ಯೋಗಿಕ ವಿದ್ಯಾರ್ಥಿ/ವಿದ್ಯಾರ್ಥಿನಿಯರುಗಳಿಗೆ ಸರ್ಕಾರವು ನಿಯಮಾನುಸಾರ ಶಿಕ್ಷಣಗಳಿಗೆ ನಿಗಧಿಪಡಿಸಿರುವ ಆಯ್ಕೆಯಾಗುವ ಪರೀಕ್ಷಾ ಶುಲ್ಕ, ಬೋಧನಾ ಶುಲ್ಕ, ಪ್ರಯೋಗಾಲಯ ಶುಲ್ಕ, ಕ್ರೀಡಾ ಶುಲ್ಕ ಹಾಗೂ ಗ್ರಂಥಾಲಯ ಶುಲ್ಕಗಳನ್ನು ಮರುಪಾವತಿಸುವ ಯೋಜನೆಗೆ ವಿಕಲಚೇತನ ವಿದ್ಯಾರ್ಥಿ/ವಿದ್ಯಾರ್ಥಿನಿಯರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದಾಖಲೆಗಳು:- ಇಲಾಖೆಯ ಅರ್ಜಿ ನಮೂನೆ, ಯುಡಿಐಡಿ ಕಾರ್ಡ್, ಕಾಲೇಜಿಗೆ ಫೀಜ್ ಕಟ್ಟಿದ ಮೂಲ ರಶೀದಿ, ಹಿಂದಿನ ತರಗತಿಯ ಅಂಕಪಟ್ಟಿ, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಇತರೆ.

ವಿವಾಹ ಪ್ರೋತ್ಸಾಹ ಯೋಜನೆ: ವಿಕಲಚೇತನ ವ್ಯಕ್ತಿಗಳನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗಳಿಗೆ ನಿರಂತರವಾಗಿ ಮಾಸಿಕ ಆದಾಯ ದೊರಕಿಸಲು ವಿಕಲಚೇತನ ಹಾಗೂ ಸಾಮಾನ್ಯ ವ್ಯಕ್ತಿಯ ಹೆಸರಿನಲ್ಲಿ 50 ಸಾವಿರ ರೂ. ಗಳ ಹೂಡಿಕೆಯ ರೂಪದಲ್ಲಿ ನೀಡಿ ಪ್ರೋತ್ಸಾಹ ನೀಡಲು ಹಾಗೂ ಅದರಿಂದ ಬರುವ ಬಡ್ಡಿ ಹಣವನ್ನು ಭತ್ಯೆಯಾಗಿ ವಿಕಲಚೇತನರನ್ನು ಮದುವೆಯಾದ ಸಾಮಾನ್ಯ ವ್ಯಕ್ತಿಗೆ ನೀಡುವ ಯೋಜನೆಗೆ ಷರತ್ತುಗಳನ್ವಯ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದಾಖಲೆಗಳು:- ಇಲಾಖೆಯ ಅರ್ಜಿ ನಮೂನೆ, ಯುಡಿಐಡಿ ಕಾರ್ಡ್, ವಿವಾಹ ನೊಂದಣಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ, ವಾಸಸ್ಥಳ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಇತರೆ.

ಅರ್ಹ ವಿಕಲಚೇತನರು ಮತ್ತು ವಿದ್ಯಾರ್ಥಿ/ ವಿದ್ಯಾರ್ಥಿನಿಯರು ನಿಗಧಿತ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 9ನೇ ಕ್ರಾಸ್. ಕೆ.ಆರ್.ಪುರಂ, ಹಾಸನ ಇವರಿಗೆ ಸಲ್ಲಿಸತಕ್ಕದ್ದು. ನಿಗಧಿತ ಅರ್ಜಿ ನಮೂನೆಗಾಗಿ ಮೇಲ್ಕಂಡ ವಿಳಾಸವನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08172-264546/295546 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...