ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮರುಮೌಲ್ಯಮಾಪನ, ಅಂಕಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ಮೇ 24 ರಿಂದ ಜೂನ್ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಶುಲ್ಕ ಪಾವತಿಸಲು ಜೂನ್ 7 ರವರೆಗೆ ಅವಕಾಶ ನೀಡಲಾಗಿದೆ. ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗೆ ಅರ್ಜಿ ಸಲ್ಲಿಸಲು ಮೇ 20 ರಿಂದ 30 ರವರೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಮೇ 31 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.
ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯೊಂದಕ್ಕೆ 410 ರೂಪಾಯಿ ಹಾಗೂ ಮರುಮೌಲ್ಯಮಾಪನಕ್ಕೆ 810 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. www.sslc.karnataka.gov.in ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಲಾಗಿದೆ.