alex Certify ಅಜ್ಜಿ ಟಿಕೆಟ್ ಕೊಡಿ ಎಂದಿದ್ದಕ್ಕೆ ಕಪಾಳ ಮೋಕ್ಷ ಮಾಡಿದ ಮಹಿಳಾ ಕಂಡಕ್ಟರ್: ಕಿವಿ ಕೇಳಿಸದಂತಾದ ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಜ್ಜಿ ಟಿಕೆಟ್ ಕೊಡಿ ಎಂದಿದ್ದಕ್ಕೆ ಕಪಾಳ ಮೋಕ್ಷ ಮಾಡಿದ ಮಹಿಳಾ ಕಂಡಕ್ಟರ್: ಕಿವಿ ಕೇಳಿಸದಂತಾದ ವಿದ್ಯಾರ್ಥಿನಿ

ಮಂಡ್ಯ: ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅಜ್ಜಿ ಟಿಕೆಟ್ ಕೊಡಿ ಎಂದು ಮಹಿಳಾ ಕಂಡಕ್ಟರ್ ಗೆ ಕೇಳಿದ್ದು, ಕೋಪಗೊಂಡ ಅವರು ಕಪಾಳ ಮೋಕ್ಷ ಮಾಡಿದ್ದಾರೆ.

ಕೆಎಂ ದೊಡ್ಡಿಯಿಂದ ಮಂಡ್ಯಕ್ಕೆ ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಘಟನೆ ನಡೆದಿದೆ. ಮಹಿಳಾ ಕಂಡಕ್ಟರ್ ಸೌಭಾಗ್ಯಮ್ಮ ಅವರಿಗೆ 15 ವರ್ಷದ ವಿದ್ಯಾರ್ಥಿನಿ ಕಾವ್ಯಶ್ರೀ ಅಜ್ಜಿ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ. ಕೋಪಗೊಂಡ ಮಹಿಳಾ ಕಂಡಕ್ಟರ್ ವಿದ್ಯಾರ್ಥಿನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿನಿ ಕಾವ್ಯಶ್ರೀಗೆ ಕಿವಿ ಸರಿಯಾಗಿ ಕೇಳಿಸುತ್ತಿಲ್ಲ. ಶೇಕಡ 60ರಷ್ಟು ಸಮಸ್ಯೆಯಾಗಿದೆ ಎಂದು ಜನವಾದಿ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...