ಮಂಡ್ಯ: ಮಂಡ್ಯ ಜಿಲ್ಲೆಯ ಆಲೆಮನೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲೆಯಾದ್ಯಂತ ದಾಳಿ ನಡೆಸಿ, ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಪರುಶೀಲನೆ ನಡೆಸಿದ್ದಾರೆ.
ಸ್ಕ್ಯಾನಿಂಗ್ ಸೆಂಟರ್ ಬಗ್ಗೆ ಅನುಮಾನ, ಲೋಪ ಕಂಡು ಬಂದರೆ ಅಂತಹ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ ಹಾಕಲಾಗುತ್ತಿದೆ. ನಾಗಮಂಗಲದಲ್ಲಿ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 2 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸೀಜ್ ಮಾಡಿದ್ದಾರೆ.
ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಪರಿಶೀಲನೆ ನಡೆಸಿದ್ದ ವೇಳೆ ಸಿಸ್ಟಮ್ ನಲ್ಲಿದ್ದ ಡೇಟಾ ಡಿಲಿಟ್ ಮಾಡಿರುವುದು ಬೆಳಕಿಗೆ ಬಂದಿದೆ. ಸ್ಕ್ಯಾನಿಂಗ್ ಇಮೇಜ್ ಹಾಗೂ ದಾಖಲೆಗಳನ್ನು ನಾಶ ಮಾಡಿದ್ದು ಎರಡು ಸ್ಕ್ಯಾನಿಂಗ್ ಸೆಂಟರ್ ಗಳ ಬಾಗಿಲು ಮುಚ್ಚಿಸಿದ್ದಾರೆ.
ಕಾವೇರಿ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಮೂರು ತಿಂಗಳ ಮಾಹಿತಿ ಡಿಲಿಟ್ ಮಾಡಿದ್ದರೆ, ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ 2 ವರ್ಷಗಳ ಮಾಹಿತಿ ಡಿಲಿಟ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸೀಜ್ ಮಾಡಲಾಗಿದೆ.