alex Certify ಬೆಳಗಾವಿಯಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ : ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿಯಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ : ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ..!

ಬೆಳಗಾವಿ : ಜಮೀನಿನ ಕಲಹಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದ ಹಿನ್ನೆಲೆ ಐವರಿಗೆ ಗಾಯಗಳಾಗಿ, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ನಡೆದಿದೆ.

ಜಮೀನಿನ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ದೊಣ್ಣೆ ಕುಡುಗೋಲು ಹಿಡಿದು ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ ಏಳು ಮಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಿಲ್ ಮುಂಗಾರಿ ಎಂಬುವವರ ಕುಟುಂಬದ ಮೇಲೆ ಗೂಂಡಾಗಳನ್ನು ಕರೆಯಿಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...