alex Certify ಕ್ಷುಲ್ಲಕ ಕಾರಣಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಬೈಕ್ ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮರ್ಡರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷುಲ್ಲಕ ಕಾರಣಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಬೈಕ್ ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮರ್ಡರ್

ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಘಟನೆ ನಡೆದಿದೆ.

ಸಂಗನಗೌಡ ಮುದಿಗೌಡರ(48) ಕೊಲೆಯಾದ ವ್ಯಕ್ತಿ. ಈರಪ್ಪ ಕಿತ್ತಲಿ ಮತ್ತು ಇತರೆ ನಾಲ್ವರು ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆನ್ನಲಾಗಿದೆ. ಸಂಗನಗೌಡರಿಗೆ ಈರಪ್ಪ ಕಿತ್ತಲಿ ಬೈಕ್ ತಗುಲಿಸಿದ್ದು, ಇದನ್ನು ಪ್ರಶ್ನಿಸಿದಕ್ಕೆ ಇಬ್ಬರ ನಡುವೆ ಜಗಳವಾಗಿ ಸಂಗನಗೌಡನ ಕೊಲೆ ಮಾಡಲಾಗಿದೆ. ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...