
ಮಂಗಳೂರು: ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆ ವೇಳೆ ಇಬ್ಬರು ಕೈದಿಗಳಿಗೆ ಗಾಯವಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ಕೊಡಿಯಾಲ ಬೈಲ್ ನಲ್ಲಿರುವ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿದ್ದ ಬ್ಯಾರಕ್ ನಲ್ಲಿ ಘಟನೆ ನಡೆದಿದೆ. ಎ ಬ್ಯಾರಕ್ ನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆ ಮಾಡಿದ ತಂಡದ ಸೆಲ್ ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.