
ಬೆಂಗಳೂರು: ನಾಗಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ತೆರಳಿದ ಫೈಟರ್ ರವಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ನಾಗಮಂಗಲ ಕ್ಷೇತ್ರದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡರ ಪತ್ನಿ ಸುಧಾ ಶಿವರಾಮೇಗೌಡ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದು, ಈ ಕ್ಷೇತ್ರದಲ್ಲಿ ಆಕಾಂಕ್ಷಿಯಾಗಿದ್ದ ಫೈಟರ್ ರವಿ ಪಕ್ಷ ತೊರೆದಿದ್ದಾರೆ.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಸಂದರ್ಭದಲ್ಲಿ ಫೈಟರ್ ರವಿಗೆ ಕೈಮುಗಿದ ವಿಚಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ರೌಡಿಶೀಟರ್ ಗಳಿಗೆ ಮಣೆ ಹಾಕುವ ಮೂಲಕ ಬಿಜೆಪಿ ರೌಡಿ ಮೋರ್ಚಾ ತೆರೆಯುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು.