
ಎಲ್ಲಾ ಕಳ್ಳರಿಗೂ ಮೋದಿ ಉಪನಾಮ ಏಕೆ ಎಂಬ ಹೇಳಿಕೆಗಾಗಿ ಲೋಕಸಭೆಯ ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಭಾರತದ ಧ್ವನಿಗಾಗಿ ಹೋರಾಡುತ್ತಿದ್ದೇನೆ. ನಾನು ಯಾವುದೇ ಬೆಲೆ ತೆರಲು ಸಿದ್ಧನಿದ್ದೇನೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಭಾರತೀಯ ಜನತಾ ಪಕ್ಷದ ಶಾಸಕ ಪೂರ್ಣೇಶ್ ಮೋದಿ ಅವರು ಎಲ್ಲಾ ಕಳ್ಳರಿಗೆ ಮೋದಿ ಸಾಮಾನ್ಯ ಉಪನಾಮ ಹೇಗೆ? ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು.
ವಿರೋಧ ಪಕ್ಷಗಳ ಹಲವು ನಾಯಕರು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ, ಇದು “ಪ್ರಜಾಪ್ರಭುತ್ವದ ನೇರ ಕೊಲೆ” ಎಂದು ಬಣ್ಣಿಸಿದ್ದಾರೆ.