ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಜೈಲು ಸೇರಿದ್ದ ಸುನಿಲ್ ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿದ್ದು, ಸುನಿಲ್, ಅನ್ಸರ್ ಮತ್ತು ಜೈನುದ್ದಿನ್ ನಡುವೆ ಜಗಳ ಆರಂಭವಾಗಿ ವಿಕೋಪಕ್ಕೆ ತಿರುಗಿದೆ. ಮಾರಾಮಾರಿಯಲ್ಲಿ ಅನ್ಸರ್ ಮತ್ತು ಜೈನುದ್ದಿನ್ ಗಾಯಗೊಂಡಿದ್ದಾರೆಂದು ಹೇಳಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.