
ದೇಶದ ಅತಿ ದೊಡ್ಡ ಹಾಕಿ ಕ್ರೀಡಾಂಗಣ ಎಂಬ ಹೆಗ್ಗಳಿಕೆ ಹೊಂದಿರುವ ಒಡಿಶಾದ ಬಿರ್ಸಾ ಮುಂಡಾ ಅಂತರಾಷ್ಟ್ರೀಯ ಕ್ರೀಡಾಂಗಣ ಲೋಕಾರ್ಪಣೆಗೊಂಡಿದೆ. ಗುರುವಾರದಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇದರ ಉದ್ಘಾಟನೆ ನೆರವೇರಿಸಿದ್ದಾರೆ.
146 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಕ್ರೀಡಾಂಗಣ ಒಟ್ಟು 21000 ಆಸನ ಸಾಮರ್ಥ್ಯವನ್ನು ಹೊಂದಿದೆ. ಈ ಕ್ರೀಡಾಂಗಣ ಕೇವಲ 11 ತಿಂಗಳ ಅವಧಿಯಲ್ಲಿ ಪೂರ್ಣಗೊಂಡಿರುವುದು ವಿಶೇಷ.
ಜನವರಿ 13 ರಿಂದ ಒಡಿಶಾದಲ್ಲಿ ಪುರುಷರ ಹಾಕಿ ವಿಶ್ವಕಪ್ ಆರಂಭವಾಗಲಿದ್ದು, ಒಟ್ಟು 44 ಪಂದ್ಯಗಳ ಪೈಕಿ 20 ಪಂದ್ಯಗಳು ಈ ಕ್ರೀಡಾಂಗಣದಲ್ಲಿಯೇ ನಡೆಯಲಿದೆ. ಉಳಿದ ಪಂದ್ಯಗಳು ಭುವನೇಶ್ವರದ ಕಳಿಂಗಾ ಕ್ರೀಡಾಂಗಣದಲ್ಲಿ ನಡೆಯಲಿದೆ.