
ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದ್ದು, ಈ ವರ್ಷ 2000 ಅಗ್ನಿಶಾಮಕ ಹುದ್ದೆಗಳ ಭರ್ತಿಗೆ ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಈ ವಿಷಯ ತಿಳಿಸಿದ್ದಾರೆ.
ಬೆಂಗಳೂರು ಮೆಟ್ರೋ ರೈಲು ನಿಗಮದ ವತಿಯಿಂದ ನಿರ್ಮಿಸಲಾಗಿರುವ ಜಯನಗರ ಅಗ್ನಿಶಾಮಕ ಠಾಣೆ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯದ ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗಾಗಿ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದಕ್ಕಾಗಿ ಇಲಾಖೆಯನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಜ್ಜುಗೊಳಿಸಲಾಗುತ್ತದೆ ಎಂದು ತಿಳಿಸಿದರು.