ಬೆಂಗಳೂರು : ಮಂಜೂರಾದ 412 ಪ್ರಾಂಶುಪಾಲರ ಹುದ್ದೆಗಳಲ್ಲಿ 310 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದರು.
ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪಿ ಎಂ ನರೇಂದ್ರ ಸ್ವಾಮಿ ಪ್ರಶ್ನೆಗೆ ಅವರು ಉತ್ತರ ನೀಡಿದರು . 310 ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ, ಹುದ್ದೆಯ ನೇಮಕ ಹೊಣೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗಿದೆ ಎಂದು ಸುಧಾಕರ್ ಹೇಳಿದರು.
ಗ್ರೂಪ್ ಬಿ ವೃಂದದಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದರು.
ಹಂತ ಹಂತವಾಗಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೆಚ್ ಎಸ್ ಗೋಪಿನಾಥ್ ಪ್ರಶ್ನಗೆ ಉತ್ತರಿಸಿದರು.
ನಾವು ನುಡಿದಂತೆ ನಡೆಯುತ್ತೇವೆ, ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 43 ಇಲಾಖೆಗಳಿಂದ 7,72,225 ಹುದ್ದೆಗಳಿದ್ದು, ಇದರಲ್ಲಿ 5,16,105 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 2,55,900 ಹುದ್ದೆಗಳು ಖಾಲಿಯಿದ್ದು, ಶೇ.33ರಷ್ಟು ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.