alex Certify ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ‘ಚಲನಚಿತ್ರ ವಾಣಿಜ್ಯ ಮಂಡಳಿ’ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ‘ಚಲನಚಿತ್ರ ವಾಣಿಜ್ಯ ಮಂಡಳಿ’ ಭೇಟಿ

ಬೆಂಗಳೂರು : ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದೆ. ನಟ ದರ್ಶನ್ ಕೃತ್ಯವನ್ನು ಖಂಡಿಸಿರುವ ಮಂಡಳಿ ರೇಣುಕಾಸ್ವಾಮಿ ಕುಟುಂಬದವರನ್ನು ಭೇಟಿ ಮಾಡಲಿದೆ.

ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್ , ಸಾರಾ ಗೋವಿಂದು, ಉಮೇಶ್ ಬಣಕಾರ್ ಸೇರಿದಂತೆ ಹಲವರು ರೇಣುಕಾಸ್ವಾಮಿ ನಿವಾಸಕ್ಕೆ ಭೇಟಿ ನೀಡಲಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಣ ಕ್ಷಣಕ್ಕೂ ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ( ಕೊಲೆಯಾದ ವ್ಯಕ್ತಿ), ಈ ರೇಣುಕಾ ಸ್ವಾಮಿ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ, ಫೋಟೋ ಕಳುಹಿಸಿದ್ದನು ಎನ್ನಲಾಗಿದೆ. ಪವಿತ್ರ ಗೌಡ ಕೂಡ ಈ ವಿಚಾರವನ್ನು ದರ್ಶನ್ ಗಮನಕ್ಕೆ ತಂದಿದ್ದರು . ನಂತರ ಯಾರೋ ಒಬ್ಬರು ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ರಾಘವೇಂದ್ರ ಎಂಬುವವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ನಂತರ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಕಾರ್ ಶೆಡ್ ಒಂದರಲ್ಲಿ ಹಲ್ಲೆ ನಡೆಸಲಾಗಿದೆ. ವೇಳೆ ನಟ ದರ್ಶನ್ ಕೂಡ ಸ್ಥಳದಲ್ಲಿದ್ದರು . ಅವರ ಸೂಚನೆ ಮೇರೆಗೆ ರೇಣುಕಾ ಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...