alex Certify BREAKING NEWS: ‘ಭಾರೀ ಬೆಂಬಲ’ದ ಹೊತ್ತಲ್ಲೇ ಸಿಎಂ ಯಡಿಯೂರಪ್ಪ ಮಹತ್ವದ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ‘ಭಾರೀ ಬೆಂಬಲ’ದ ಹೊತ್ತಲ್ಲೇ ಸಿಎಂ ಯಡಿಯೂರಪ್ಪ ಮಹತ್ವದ ಮನವಿ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಿನ್ನೆಲೆಯಲ್ಲಿ ಸ್ವಾಮೀಜಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಸಮುದಾಯದ ಸಂಘಟನೆಗಳಿಂದಲೂ ಬೆಂಬಲ ವ್ಯಕ್ತವಾಗಿದೆ. ಯಡಿಯೂರಪ್ಪರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೆಂದು ಹೋರಾಟಗಳನ್ನು ಕೂಡ ನಡೆಸಲಾಗಿದೆ.

ಇದೇ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ಗೌರವಕ್ಕೆ ಚ್ಯುತಿ ತರಬಾರದು ಎಂದು ಮನವಿ ಮಾಡಿದ್ದಾರೆ.

ರಾಜಕೀಯ ಬೆಳವಣಿಗೆಗಳನ್ನು ಆಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದು ಎಂದು ವಿನಂತಿಸಿದ್ದಾರೆ.

ಅಭಿಮಾನ ಶಿಸ್ತಿನ ವ್ಯಾಪ್ತಿಯನ್ನು ಮೀರಬಾರದು. ಪಕ್ಷ ನನಗೆ ಮಾತೃ ಸಮಾನವಾಗಿದೆ. ಆದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆ ಎಂದು ನಂಬಿರುವೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...