alex Certify ಸಿನಿಮಾದಲ್ಲಿ ಚಾನ್ಸ್ ಕೊಡುವುದಾಗಿ ಸೆಕ್ಸ್ ದಂಧೆ ನಡೆಸುತ್ತಿದ್ದ ನಿರ್ಮಾಪಕ ಸೇರಿ ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿಮಾದಲ್ಲಿ ಚಾನ್ಸ್ ಕೊಡುವುದಾಗಿ ಸೆಕ್ಸ್ ದಂಧೆ ನಡೆಸುತ್ತಿದ್ದ ನಿರ್ಮಾಪಕ ಸೇರಿ ಮೂವರು ಅರೆಸ್ಟ್

ಥಾಣೆ: ಪೋರ್ನ್ ಸಿನಿಮಾ ನಿರ್ಮಾಣದ ಆರೋಪದ ಮೇಲೆ ಖ್ಯಾತ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ ಬಂಧಿತನಾಗಿರುವ ಬೆನ್ನಲ್ಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರ ಥಾಣೆ ಜಿಲ್ಲೆಯ ಮೀರಾ ಪ್ರದೇಶದಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸಿನಿಮಾ ನಿರ್ಮಾಪಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಕೊಡುವುದಾಗಿ ನಂಬಿಸುತ್ತಿದ್ದ ನಿರ್ಮಾಪಕ ಸೆಕ್ಸ್ ದಂಧೆಗೆ ಯುವತಿಯರನ್ನು ಬಳಸಿಕೊಳ್ಳುತ್ತಿದ್ದ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ.

ಮೀರಾ ರಸ್ತೆಯ ಹೌಸಿಂಗ್ ಕಾಂಪ್ಲೆಕ್ಸ್ ನಲ್ಲಿ ದಂಧೆ ನಡೆಸಲಾಗುತ್ತಿತ್ತು. ಅವಕಾಶ ಕೇಳಿಕೊಂಡು ಬರುತ್ತಿದ್ದ ಯುವತಿಯರನ್ನು ಆಡಿಷನ್ ಹೆಸರಲ್ಲಿ ಇಂತಹ ಕೃತ್ಯಕ್ಕೆ ಬಳಸಿಕೊಳ್ಳಲಾಗುತ್ತಿತ್ತು. ಮಾಹಿತಿ ತಿಳಿದು ಗ್ರಾಹಕರ ಸೋಗಿನಲ್ಲಿ ತೆರಳಿದ ಪೊಲೀಸರು ದಾಳಿ ಮಾಡಿ ನಿರ್ಮಾಪಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...