ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಅವರ ಪುತ್ರ ಮತ್ತು ರಾಜ್ಯ ಸಚಿವ ನಾರಾ ಲೋಕೇಶ್ ಮತ್ತು ಸೊಸೆ ಬ್ರಹ್ಮಿಣಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳನ್ನು ಮಾಡಿದ ಆರೋಪದ ಮೇಲೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಚಿತ್ರನಿರ್ಮಾಪಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವರ್ಮಾ ವಿರುದ್ಧ ತೆಲುಗು ದೇಶಂ ಪಕ್ಷದ(ಟಿಡಿಪಿ) ಸ್ಥಳೀಯ ಮುಖಂಡರೊಬ್ಬರು ಮಡ್ಡಿಪಾಡು ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಟಿಡಿಪಿ ಮಂಡಲ ಪರಿಷತ್ ಕಾರ್ಯದರ್ಶಿ ರಾಮಲಿಂಗಂ ಅವರು ಕಳೆದ ವರ್ಷ ಅಂದಿನ ಪ್ರತಿಪಕ್ಷ ನಾಯಕ ಚಂದ್ರಬಾಬು ನಾಯ್ಡು ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದ ವರ್ಮಾ ವಿರುದ್ಧ ದೂರಿದ್ದಾರೆ. ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.
ಈ ಹಿಂದೆ ತಮ್ಮ ‘ವ್ಯೂಹಂ’ ಸಿನಿಮಾದ ಪ್ರಚಾರದ ಭಾಗವಾಗಿ ವರ್ಮಾ ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಕಾಮೆಂಟ್ ಮಾಡಿದ್ದರು.