alex Certify ಬಲವಂತವಾಗಿ ವಸೂಲಿಗಿಳಿದರೆ ಸಾಲ, ಬಡ್ಡಿ ಮನ್ನಾ: ಕೂಡಲೇ ಒತ್ತೆ ಇಟ್ಟ ಆಸ್ತಿ, ವಸ್ತು ಬಿಡುಗಡೆ: ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ನಿಯಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಲವಂತವಾಗಿ ವಸೂಲಿಗಿಳಿದರೆ ಸಾಲ, ಬಡ್ಡಿ ಮನ್ನಾ: ಕೂಡಲೇ ಒತ್ತೆ ಇಟ್ಟ ಆಸ್ತಿ, ವಸ್ತು ಬಿಡುಗಡೆ: ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ನಿಯಮ

ಬೆಂಗಳೂರು: ವಿಧಾನಸಭೆಯಲ್ಲಿ ಗುರುವಾರ ಅನಧಿಕೃತ ಅಥವಾ ನೋಂದಾಯಿತವಲ್ಲದ ಮೈಕ್ರೋಫೈನಾನ್ಸ್ ಸಂಸ್ಥೆಗಳ ಬಲವಂತದ ಸಾಲ ವಸೂಲಿ ಮತ್ತು ಕಿರುಕುಳಕ್ಕೆ ಕರಿವಾಣ ಹಾಕುವ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ವಸೂಲಾತಿ ಬಲವಂತದ ಕ್ರಮಗಳ ಪ್ರತಿಬಂಧಕ ವಿಧೇಯಕ- 2025 ಮಂಡಿಸಲಾಗಿದೆ.

ಅನಧಿಕೃತ ಹಾಗೂ ನೋಂದಾಯಿತವಲ್ಲದ ಮೈಕ್ರೋಫೈನಾನ್ಸ್ ಅಥವಾ ಲೇವಾದೇವಿದಾರರು ಸಾಲಗಾರನಿಂದ ಬಲವಂತದ ವಸೂಲಿಗೆ ಪ್ರಯತ್ನಿಸುವುದು ನಿಷಿದ್ಧವಾಗಿದೆ. ಒಂದೊಮ್ಮೆ ಸಾಲ ಪಡೆದಿರುವ ಸಮಾಜದ ದುರ್ಬಲ ವರ್ಗದವರ ಬಳಿ ಬಲವಂತ ಮಾಡಿದರೆ ಸಾಲಗಾರ ಪಡೆದಿರುವ ಸಾಲ ಮತ್ತು ಬಡ್ಡಿ ಮನ್ನಾ ಆಗಿದೆ ಎಂದು ಭಾವಿಸಬೇಕು ಎನ್ನುವ ಮಹತ್ವದ ಅಂಶವನ್ನು ವಿಧೇಯಕದಲ್ಲಿ ಸೇರ್ಪಡೆ ಮಾಡಲಾಗಿದೆ.

ಇಂತಹ ಸಂಸ್ಥೆ ಅಥವಾ ಲೇವಾದೇವಿದಾರರ ಸಾಲ ಬಡ್ಡಿ ವಸೂಲಿಗೆ ಹೂಡುವ ಯಾವುದೇ ದಾವೆ ಅಥವಾ ವ್ಯವಹಾರವನ್ನು ನ್ಯಾಯಾಲಯಗಳು ಪುರಸ್ಕರಿಸಬಾರದು.

ಸಾಲಗಾರ ಅಥವಾ ಆತನೊಂದಿಗೆ ಯಾರ ವಿರುದ್ಧವಾದರೂ ಜಂಟಿಯಾಗಿ ದಾವೆ ಹೂಡಿದ್ದರೆ ತಕ್ಷಣದಿಂದ ರದ್ದಾಗಬೇಕು. ಯಾವುದೇ ಮೈಕ್ರೋಫೈನಾನ್ಸ್ ಸಂಸ್ಥೆಗಳು ಕಿರು ಸಾಲಕ್ಕೆ ಅಡಮಾನ ಇಟ್ಟುಕೊಂಡಿದ್ದರೆ ಅಂತಹ ಆಸ್ತಿ ವಸ್ತುಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಹೇಳಲಾಗಿದೆ.

ಸಾಲಗಾರ ಸಾಲ ನೀಡಿರುವವರು ವಸೂಲಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ದೂರು ನೀಡಿದರೆ ಪೊಲೀಸರು ಸ್ವೀಕರಿಸಬೇಕು. ಕಿರುಕುಳ ಸಾಬೀತಾದಲ್ಲಿ ಶಿಕ್ಷೆಯಾಗಬೇಕು ರಾಜ್ಯದಲ್ಲಿ ವ್ಯವಹಾರ ನಡೆಸುವ ಯಾವುದೇ ಫೈನಾನ್ಸ್ ಕಂಪನಿ ಕಡ್ಡಾಯವಾಗಿ ನೋಂದಣಿ ಪ್ರಾಧಿಕಾರದ ಬಳಿ ನೋಂದಣಿ ಮಾಡಿಸಿಕೊಂಡು ಪರವಾನಿಗೆ ಪಡೆಯಬೇಕು ಎಂದು ವಿಧೇಯಕದಲ್ಲಿ ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...