400 ಪಶು ವೈದ್ಯರ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ

ಬೆಂಗಳೂರು: ಗುತ್ತಿಗೆ ಆಧಾರದ ಮೇಲೆ 400 ಪಶು ವೈದ್ಯರನ್ನು ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಗಮನಸೆಳೆಯುವ ಸೂಚನೆಯಡಿ ಕಾಂಗ್ರೆಸ್ ಸದಸ್ಯ ಎ.ಆರ್. ಕೃಷ್ಣಮೂರ್ತಿ ಅವರು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಪಶು ಆಸ್ಪತ್ರೆಗಳಲ್ಲಿ ವೈದ್ಯರು ಇಲ್ಲದೆ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

ಇದಕ್ಕೆ ಉತ್ತರ ನೀಡಿದ ಸಚಿವ ವೆಂಕಟೇಶ್, ಎಲ್ಲಾ ಕಡೆಗಳಲ್ಲಿಯೂ ಸಮಸ್ಯೆ ಇದ್ದು, ಹುದ್ದೆಗಳ ಬರ್ತಿಗೆ ಪದೇ ಪದೇ ಕೇಳುತ್ತಿದ್ದೇವೆ. 400 ಪಶು ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read