ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಮೈಕ್ರೋ ಫೈನಾನ್ಸ್ ನಿಂದ ಸಾಲ ಪಡೆದ ಜಯಶೀಲ(53) ವಿಷದ ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ಘಟನೆ ನಡೆದಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಾಳದೆ ಜಯಶೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಫೈವ್ ಸ್ಟಾರ್ ಸೇರಿದಂತೆ ಎರಡು ಮೈಕ್ರೋ ಫೈನಾನ್ಸ್ ಬಳಿ 5 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಮನೆ, ವ್ಯವಸಾಯ, ಹಸು ಸಾಕಾಣಿಕೆಗಾಗಿ ಜಯಶೀಲ ಸಾಲ ಮಾಡಿಕೊಂಡಿದ್ದು, ಪ್ರತಿ ತಿಂಗಳು 20 ಸಾವಿರ ರೂ. ಗೂ ಹೆಚ್ಚು ಇಎಂಐ ಪಾವತಿಸಬೇಕಿತ್ತು.
ಸಾಲ ಮಾಡಿ ಖರೀದಿಸಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿದ್ದು, ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಸ್ಥಿತಿಗೆ ತಲುಪಿದ್ದ ಅವರು ಮನನೊಂದು ತಮ್ಮ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಲ್ಲಹಳ್ಳಿಯಿಂದ ವಿಷದ ಮಾತ್ರೆ ತಂದು ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.