alex Certify BIG NEWS: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಮಧ್ಯಾಹ್ನದ ವೇಳೆಗೆ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯ ಖಾಸಗಿ ವಾರ್ಡ್ ಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ ವಾರ್ಷಿಕ ರೊಟಿನ್ ಚೆಕಪ್ ಗಾಗಿ ಸಚಿವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

63 ವರ್ಷದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಏಮ್ಸ್ ಗೆ ದಾಖಲಾಗಿದ್ದು, ಸಂಜೆ ವೇಳೆಗೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...