ಬೆಂಗಳೂರು : ಬ್ಯಾಂಕುಗಳಲ್ಲಿ ಆಗುವ ಅವ್ಯವಹಾರಗಳಿಗೆಲ್ಲಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿಗಳು ರಾಜೀನಾಮೆ ನೀಡಬೇಕಲ್ಲ. ಜಿ.ಟಿ ದೇವೇಗೌಡರು ಅವರ ರಾಜೀನಾಮೆ ಕೇಳಿದ್ದಾರ? ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿಯಾಗಲಿ, ಅಂತಿಮ ವರದಿಯಾಗಲಿ ಯಾವುದೂ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಖಜಾನೆ ಇಲಾಖೆಯಿಂದ ಬೇರೆ ಖಾತೆಗಳಿಗೆ ರೂ.180 ಕೋಟಿ ವರ್ಗಾವಣೆ ಆಗಿಲ್ಲ. ಖಜಾನೆಯಿಂದ ಇಲಾಖೆಗೆ ಹಣ ಹೋಗಿರುತ್ತದೆ. ಅಲ್ಲಿ ಅವ್ಯವಹಾರವಾಗಿರುವ ಬಗ್ಗೆ ಎಸ್.ಐ. ಟಿ ತನಿಖೆ ಮಾಡುತ್ತಿದೆ. ಸಿಬಿಐ, ಎಸ್.ಐ ಟಿ ಮತ್ತು ಇ.ಡಿ. ಹೀಗೆ ಮೂರು ಸಂಸ್ಥೆಗಳ ಮೂಲಕ ತನಿಖೆಗಳಾಗುತ್ತಿದೆ. ತನಿಖೆ ವರದಿ ಇನ್ನೂ ಬಂದಿಲ್ಲ.
ಬ್ಯಾಂಕುಗಳಲ್ಲಿ ಆಗುವ ಅವ್ಯವಹಾರಗಳಿಗೆಲ್ಲಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿಗಳು ರಾಜೀನಾಮೆ ನೀಡಬೇಕಲ್ಲ. ಜಿ.ಟಿ ದೇವೇಗೌಡರು ಅವರ ರಾಜೀನಾಮೆ ಕೇಳಿದ್ದಾರ? ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿಯಾಗಲಿ, ಅಂತಿಮ ವರದಿಯಾಗಲಿ ಯಾವುದೂ ಬಂದಿಲ್ಲ. ಖಜಾನೆಯಿಂದ ಹಣ ವರ್ಗಾವಣೆ ಆಗುವಾಗ ಪ್ರತಿ ಸಾರಿಯೂ ನನ್ನ ಬಳಿ ಬರುವುದಿಲ್ಲ. ಎಷ್ಟು ಹಣವಿದೆಯೋ ಅಷ್ಟನ್ನು ಅಧಿಕಾರಿಗಳು ಬಿಡುಗಡೆ ಮಾಡುತ್ತಾರೆ. ಅದಕ್ಕೆ ನನ್ನ ಸಹಿ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.