ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ವಿವಿಧ ಹುದ್ದೆಗಳಿಗೆ ನಡೆಯುವ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕೆಂದು ಹೆಚ್ಚುತ್ತಿರುವ ಬೇಡಿಕೆ ಪರಿಗಣಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಕ್ಲರಿಕಲ್ ಕೇಡರ್ ಪರೀಕ್ಷೆಯನ್ನು ಸ್ಥಳೀಯ ಅಥವ ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕೆಂಬ ಬೇಡಿಕೆ ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಪರಿಶೀಲನೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಮಂಗಳವಾರ ಹೇಳಿದೆ.
ಮನೆ ಅಂಗಳದಲ್ಲಿ ಪ್ರತ್ಯಕ್ಷವಾದ ಅನಿರೀಕ್ಷಿತ ಅತಿಥಿ ಕಂಡ ಕುಟುಂಬ ಕಂಗಾಲು
ಇನ್ನೊಂದು ಮುಖ್ಯ ಸಂಗತಿ ಎಂದರೆ ಈ ಸಮಿತಿ
ವರದಿ ಸಲ್ಲಿಸುವವರೆಗೂ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ (ಐಬಿಪಿಎಸ್) ನಡೆಸುವ ಪರೀಕ್ಷೆಗಳನ್ನು ತಡೆಹಿಡಿಯಲಾಗುತ್ತದೆ ಎಂದು ಹಣಕಾಸು ಇಲಾಖೆ ಹೇಳಿದೆ.
ಸಮಿತಿಯು ತನ್ನ ಶಿಫಾರಸುಗಳನ್ನು 15 ದಿನಗಳಲ್ಲಿ ನೀಡಲಿದೆ. ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಪ್ರಾರಂಭಿಸಿದ ಪರೀಕ್ಷೆಯನ್ನು ನಡೆಸುವ ಪ್ರಕ್ರಿಯೆಯನ್ನು ಸಮಿತಿಯ ಶಿಫಾರಸುಗಳು ಲಭ್ಯವಾಗುವವರೆಗೆ ತಡೆಹಿಡಿಯಲಾಗುತ್ತದೆ ಎಂದು ಹಣಕಾಸು ಇಲಾಖೆ ಸ್ಪಷ್ಟಪಡಿಸಿದೆ.
ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಕ್ಲರಿಕಲ್ ಕೇಡರ್ ಪರೀಕ್ಷೆಯನ್ನು ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ನಡೆಸಿ ನೇಮಕ ಮಾಡಿಕೊಳ್ಳುವುದರಿಂದ ಆಗುತ್ತಿರುವ ಸಮಸ್ಯೆ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು.