ಬೆಂಗಳೂರು : ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಬೇಕು ಜನರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಪರಮೇಶ್ವರ್ ರೇಣುಕಾಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಲು ಸೋಮವಾರ ತೆರಳಬೇಕಿತ್ತು, ಆದರೆ ಹೋಗಲು ಆಗಿರಲಿಲ್ಲ.ರೇಣುಕಾಸ್ವಾಮಿ ಮನೆಗೆ ಇಂದು ಅಥವಾ ನಾಳೆ ಹೋಗಿ ಬರ್ತೀನಿ ಎಂದರು.
ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ತನಿಖೆ ಬಳಿಕ ನಿರ್ಧಾರ ಕೈಗೊಳ್ಳುತ್ತಿದ್ದೇವೆ ಎಂದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರೇ ಭಾಗಿ ಆದರೂ ಅವರ ವಿರುದ್ಧ ಕ್ರಮ ಕೈಗೊಳ್ತೇವೆ, ಯಾರನ್ನೂ ಬಿಡಲ್ಲ ಎಂದು ಹೇಳಿದರು.