ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇ ನಲ್ಲಿ ಅಪಘಾತ ತಡೆಗೆ ವೇಗದ ಮಿತಿ ವಿಧಿಸಲಾಗಿದೆ. ಈಗಾಗಲೇ ಅಪಘಾತ ತಡೆಯುವ ಉದ್ದೇಶದಿಂದ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.
ಸ್ಪೀಡ್ ರಾಡಡಾ ಗನ್ ಗಳನ್ನು ಬಳಸಿ ಪ್ರಕರಣ ದಾಖಲಿಸಲಾಗುತ್ತಿದೆ. ಅಪಘಾತ ಕಡಿಮೆ ಮಾಡಲು ಪರಿಹಾರ ಕ್ರಮಗಳನ್ನು ಅಧಿಕಾರಿಗಳು ಮುಂದುವರೆಸಿದ್ದು, ಮಿತಿಮೀರಿದ ವೇಗದಲ್ಲಿ ವಾಹನಗಳ ಸಂಚಾರದಿಂದ ಅಪಘಾತ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಂಟೆಗೆ 100 ಕಿಲೋಮೀಟರ್ ವೇಗದ ಮಿತಿ ನಿಗದಿಪಡಿಸಲಾಗಿದೆ. ವೇಗದ ಮಿತಿಮೀರಿದವರಿಗೆ 1000 ರೂ. ದಂಡ ಹಾಗೂ ಡಿಎಲ್ ಕ್ಯಾನ್ಸಲ್ ಮಾಡಲಾಗುವುದು ಎಂದು ಹೇಳಲಾಗಿದೆ.
ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವೇಗಕ್ಕೆ ಕಡಿವಾಣ ಹಾಕಲಾಗಿದ್ದು, ಸ್ಪೀಡ್ ಲಿಮಿಟ್ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಅಪಘಾತ ತಡೆಯಲು ಗಂಟೆಗೆ 100 ಕಿಲೋಮೀಟರ್ ವೇಗಮಿತಿ ನಿಗದಿಪಡಿಸಲಾಗಿದೆ.