ಮುಂಬೈ: ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಸಹಾಯಕ ಇನ್ಸ್ ಪೆಕ್ಟರ್ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮುಂಬೈನ ಮೇಘವಾಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಔರಂಗಾಬಾದ್ ಮೂಲದವನಾದ ಪ್ರಮುಖ ಆರೋಪಿ ಸಾಮಾಜಿಕ ಜಾಲತಾಣದ ಮೂಲಕ ಮಹಿಳಾ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ಗೆ ಪರಿಚಯವಾಗಿದ್ದ.
ಮುಂಬೈನ ಪೊವಾಯ್ ಪ್ರದೇಶಕ್ಕೆ ಭೇಟಿಯಾಗಲು ಬಂದಿದ್ದ ಆರೋಪಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ತನ್ನ ನೀಚಕೃತ್ಯದ ದೃಶ್ಯಗಳನ್ನು ಸೆರೆಹಿಡಿದು ಇಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಬ್ಲಾಕ್ ಮೇಲ್ ಮಾಡಿದ್ದಾರೆ. ಜೂನ್ 11 ರಂದು ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ ಮೇಘವಾಡಿ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.